Feb 19, 2008

ಅವಿಲ್ಲದೆ ನಾವಿಲ್ಲ.

ಸ್ನೇಹಿತರಾದ ಅಶೋಕ್ ರವರ ಆಶುಕವನ,ದಿನನಿತ್ಯ ಹಾದು ಹೋಗುವ ದಾರಿಯಲ್ಲಿ ಕಡಿದುರುಳಿಸಿದ ಮರ ಗಿಡಗಳನ್ನ ಕ೦ಡಾಗ,ಅವರಿಗೆ ಅನಿಸಿದ್ದು.ನನಗೂ ಅನಿಸುತಿದೆ ಯಾಕೋ ಇ೦ದು ಅವಿಲ್ಲದೆ ನಾವಿಲ್ಲ.












ಗಿಡ-ಮರ ಮತ್ತು ಮನುಷ್ಯ

ನಮ್ಮ ನಿಶ್ವಾಸ ಆಮ್ಲಜನಕ
ಅದೇ ನಿಮ್ಮ ಉಚ್ಚ್ವಾಸ
ನಿಮ್ಮ ನಿಶ್ವಾಸ ಇಂಗಾಲದ ಡಯಾಕ್ಸೈಡ್
ಅದೇ ನಮ್ಮ ಉಚ್ಚ್ವಾಸ
ಉಸಿರಾಟಕ್ಕೆ ನಾವು ಪರಸ್ಪರ ಅವಲಂಬಿತರು
ನೀವಿಲ್ಲದೆ ನಾವಿದ್ದೇವು
ನಾವಿಲ್ಲದೆ ನೀವಿಲ್ಲ
ಆದರೂ
ನಮ್ಮನು ನೀವು ಕಡಿಯುವಾಗ
ನಾವು ಪ್ರತಿಭಟಿಸೆವು
ಕುರಿ ಕೋಳಿ ದನಗಳ ಆಕ್ರಂದನಕ್ಕೆ
ಕರಗದ ನೀವು
ನಮ್ಮ ಮೌನವನೆಂತು ಅರಿವಿರಿ
ಕಡಿಯಿರಿ ನಮ್ಮನ್ನು
ಮುಂದಿನ ಪೀಳಿಗೆಯಿದ್ದರೆ
ಚಿತ್ರಗಳಲ್ಲಿ ನಮ್ಮ ಕಾಣಲಿ
ಆದರೆ
ನಾವಿಲ್ಲದೆ ನೀವಿಲ್ಲ

ಅಶೋಕ ಎಸ್.

4 comments:

sunaath said...

ನನಗೆ ಸ್ವಲ್ಪ ಕನ್ಫ್ಯೂಜನ್ ಆಗ್ತಾ ಇದೆ. ಉಚ್ಚ್ವಾಸ ಅಂದರೆ ಉಸಿರು ಒಳಗೆ ಎಳೆದುಕೊಳ್ಳುವದು,i.e. ಆಮ್ಲಜನಕವನ್ನು ಅಲ್ಲವೆ? ನಿಶ್ವಾಸ ಅಂದರೆ ಉಸಿರು ಹೊರಬಿಡುವದು CO-2 ಅನ್ನು ಅಲ್ಲವೆ? ಇದಿಲ್ಲಿ ತಿರುಗುಮುರುಗಾಗಿದಿಯೆ?

sunaath said...

ಮರಗಳು ಹೇಳುತ್ತಿರುವ ಮಾತುಗಳು ಇವು ಎನ್ನುವದು ಲಕ್ಷ್ಯಕ್ಕೆ ಬಂದಾಗ ನನ್ನ ಕನ್ಫ್ಯೂಜನ್ ಆವಿಯಾಯಿತು. ಸುಂದರವಾದ ಕವನಕ್ಕಾಗಿ ಅಭಿನಂದನೆಗಳು.

Srikanth said...

ಬಹಳಾ ಸೊಗಸಾಗಿ ಮೂಡಿಬಂದಿದೆ. :)

Sushrutha Dodderi said...

ಪ್ರಿಯ ಶ್ರೀಧರ್,
ನಮಸ್ಕಾರ. ಹೇಗಿದ್ದೀರಿ?

ನಿಮಗೆ ಗೊತ್ತಿರೋ ಹಾಗೆ, ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ’ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ’ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ’ಸಂಪದ’ದ ಹರಿಪ್ರಸಾದ್ ನಾಡಿಗ್, ’ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ’ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಸುಶ್ರುತ ದೊಡ್ಡೇರಿ